ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Sunday, May 8, 2011

ಸಂತ ಶಿಶುನಾಳ ಶರೀಫರು

ಶಿಶುನಾಳ ಶರೀಫರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಕ್ರಿ.ಶ. ೧೮೧೯ ಮಾರ್ಚ ೭ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ.ಮುಲ್ಕಿ ಪರೀಕ್ಷೆ ಪಾಸು ಮಾಡಿದ ಬಳಿಕ ಶರೀಫರು ಕೆಲ ಕಾಲ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರೆಂದು ಕೆಲಸ ಮಾದಿದರು. ಆದರೆ ಮುಂದೆ ಈ ಕೆಲಸವನ್ನು ಬಿಟ್ಟು ಬಿಟ್ಟರು. ಈ ಸಮಯದಲ್ಲಿ ಶರೀಫರಿಗೆ ಕಳಸದ ಗುರು ಗೋವಿಂದಭಟ್ಟರಿಂದ ಅನುಗ್ರಹವಾಯಿತು. ಮಗನು ಕೆಲಸವನ್ನು ಬಿಟ್ಟು ಆಧ್ಯ್ಶಾತ್ಮಚಿಂತನೆಯಲ್ಲಿ ತೊಡಗಿಸಿಕೊಂಡದ್ದರಿಂದ ಶರೀಫರ ತಂದೆ ತಾಯಿ ಅವರಿಗೆ ಕುಂದಗೋಳ ನಾಯಕ ಮನೆತನದ ಫಾತಿಮಾ ಎಂಬ ಕನ್ಯೆಯೊಂದಿಗೆ ಮದುವೆ ಮಾಡಿದರು.

ಕೆಲವು ಸಮಯದ ನಂತರ ಇವರಿಗೆ ಒಂದು ಹೆಣ್ಣು ಮಗು ಜನಿಸಿತು.ದುರ್ದೈವದಿಂದ ಕೆಲವು ತಿಂಗಳುಗಳಲ್ಲಿ ಹೆಂಡತಿ ತೀರಿಕೊಂಡರು. ಶರೀಫರು ಆ ಬಳಿಕ ತಮ್ಮ ಜೀವನವನ್ನು ಆಧ್ಯಾತ್ಮಸಾಧನೆಗೆ ಮುಡಿಪಿಟ್ಟರು.

ಶರೀಫರ ಮರಣದ ತರುವಾಯ ಅವರ ಅಂತ್ಯಕ್ರಿಯೆಯು ಹಿಂದು ಹಾಗು ಮುಸಲ್ಮಾನ ಭಕ್ತರ ಸಮ್ಮುಖದಲ್ಲಿ ನೆರವೇರಿತು. ಶರೀಫರು ಹಾಡಿದ ಪದಗಳು ಧಾರವಾಡ ಜಿಲ್ಲೆಯ ಆಡುಭಾಷೆಯ ಶೈಲಿಯಲ್ಲಿವೆ. ಈ ಪದಗಳಲ್ಲಿ ಕೆಲವು ದೇವತಾಸ್ತುತಿಯ ಪದಗಳಾದರೆ, ಇನ್ನು ಕೆಲವು ಪದಗಳು ತತ್ವಬೋಧನೆಯ ಪದಗಳಾಗಿವೆ.ಹೆಚ್ಚಿನ ಪದಗಳು ಕನ್ನಡದಲ್ಲಿ ಇದ್ದರೂ ಸಹ ಕೆಲವು ಪದಗಳು ಉರ್ದು ಭಾಷೆಯಲ್ಲಿವೆ. ಕನ್ನಡದ ಖ್ಯಾತ ಹಾಡುಗಾರ ಶ್ರೀ ಅಶ್ವಥ್ಥರು ಇವರ ಅನೇಕ ಪದಗಳನ್ನು ಹಾಡಿದ್ದಾರೆ.


ಶಿಶುನಾಳ ಶರೀಫರನ್ನು ಕರ್ನಾಟಕದ ಕಬೀರ್ ದಾಸ್ ಎಂದು ಕರೆಯಲಾಗುತ್ತದೆ. ಹಿಂದೂ, ಮುಸ್ಲಿಮರೆಂಬ ಭೇದವಿಲ್ಲದೆ ಎಲ್ಲರೂ ಅವರನ್ನು ಸಂತರೆಂದು ಪರಿಗಣಿಸಿದ್ದಾರೆ. ಕರ್ನಾಟಕದ ಮೊದಲನೆಯ ಮುಸ್ಲಿಂ ಕವಿ ಎಂಬ ಖ್ಯಾತಿ ಕೂಡ ಅವರಿಗಿದೆ.ಇಮಾಮ್ ಸಾಹೇಬ್ ಮತ್ತು ಹಾಜುಮಾ ಎಂಬ ದಂಪತಿಗಳ ಮಗನಾಗಿ ಜನಿಸಿದ ಶರೀಫರ ಹುಟ್ಟೂರು ಧಾರವಾಡ ಜಿಲ್ಲೆಯ ಶಿಶುನಾಳ ಎಂಬ ಚಿಕ್ಕ ಗ್ರಾಮ. ಅಲ್ಲಿಯೇ ಕನ್ನಡ ಮತ್ತು ಉದು ಕಲಿತು ಕನ್ನಡ ಉಪಾಧ್ಯಾಯನಾಗಿ ಸ್ವಲ್ಪ ಕಾಲ ಸೇವೆ ಸಲ್ಲಿಸಿದರು. ಶರೀಫರು ಫಾತೀಮಾ ಎಂಬಾಕೆಯನ್ನು ಮದುವೆಯಾದರು. ಒಂದು ಹೆಣ್ಣು ಮಗುವಾಯಿತು.ಸ್ವಲ್ಪ ಕಾಲದ ನಂತರ ಮಗು ತಾಯಿ ಇಬ್ಬರೂ ಗತಿಸಿದರು. ಶರೀಫರಿಗೆ ಜೀವನದಲ್ಲಿ ಬೇಸರವಾದರೂ, ದೇವರಲ್ಲಿ ನಂಬಿಕೆ ಉಳಿದಿತ್ತು. ತಾಳ್ಮೆಯಿಂದ ಸಜ್ಜನರ ಹಾಗೂ ವಿದ್ಯಾವಂತರ ಸಹವಾಸದಲ್ಲಿಯೇ ಕಾಲ ಕಳೆಯುತ್ತಾ ಬಂದರು. ತಮಗೆ ಸರಿಯಾಗಿ ಮಾರ್ಗದರ್ಶನ ನೀಡುವಂತಹ ಗುರುವಿಗಾಗಿ ಅವರು ಊರೂರು ಅಲೆದರು. ಕೊನೆಗೆ ಗೋವಿಂದ ಭಟ್ಟ ಎಂಬ ಗುರುವಿನಲ್ಲಿ ಸರಿಯಾದ ಮಾರ್ಗದರ್ಶನ ದೊರೆಯಿತು. ಯಾವುದೇ ಮತತ ಬಗ್ಗೆ ಮೂಡನಂಬಿಕೆ ಇಲ್ಲದ ಈ ಗುರುಗಳು ಶರೀಫರಿಗೆ ತುಂಬಾ ಮೆಚ್ಚುಗೆಯಾದರು. ಗುರುಶಿಷ್ಯರಿಬ್ಬರೂ ಮಸೀದಿಗಳಿಗೆ, ದೇವಾಲಯಗಳಿಗೆ ಸಂದರ್ಶನಕ್ಕಾಗಿ ಹೊರಟರು. ಶರೀಫರು ಅನೇಕ ಹಾಡುಗಳನ್ನು ರಚಿಸಿ ಹಾಡಿದರು. ಈ ಗುರುಗಳ ಜೊತೆಗೆ ನವಲಗುಂದದ ನಾಗಲಿಂಗಮತಿ ಮತ್ತು ಗಂಗೆಯ ಮಡಿವಾಳಪ್ಪ ಎಂಬುವರು ಸಹ ಶರೀಫರ ಮೇಲೆ ಹೆಚ್ಚಿನ ಪರಿಣಾಮ ಬೀರಿದರು. ಅಡವಿ ಸ್ವಾಮಿ ಹಾಗೂ ಸಿದ್ದಾರೂಢ ಸ್ವಾಮಿಗಳ ಪ್ರಭಾವವೂ ಅವರ ರಚನೆಗಳಲ್ಲಿ ಕಂಡುಬರುತ್ತದೆ.

1 comment: